ಹುಣಸಗಿ: ಮಳೆಯಿಂದ ಹಾನಿಯಾದ ನಾರಾಯಣಪುರದ ಸುತ್ತಮುತ್ತಲಿನ ಜಮೀನುಗಳಿಗೆ ಶಾಸಕ ರಾಜಾ ವೇಣುಗೋಪಾಲ ನಾಯಕ ಭೇಟಿ ಪರಿಶೀಲನೆ
ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿದ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಾದ ನಾರಾಯಣಪುರದ ಸುತ್ತಮುತ್ತಲಿನ ಜಮೀನುಗಳಿಗೆ ಶಾಸಕ ರಾಜ ವೇಣುಗೋಪಾಲ ಭೇಟಿ ನೀಡಿ ಸಮಗ್ರವಾಗಿ ಪರಿಶೀಲಿಸಿದರು ಜಮೀನಿನಲ್ಲಿ ಜಲಾವೃತವಾದ ಹತ್ತಿ, ತೊಗರಿ, ಇತರ ಬೆಳೆಗಳನ್ನು ವೀಕ್ಷಿಸಿ ಅಧಿಕಾರಿಗಳಿಂದ ಸಮರ್ಪಕ ಮಾಹಿತಿ ಪಡೆದುಕೊಂಡು ಅವರು ಸೂಕ್ತ ರೀತಿಯಲ್ಲಿ ಬೆಳೆ ಹಾನಿ ಸಮೀಕ್ಷೆ ಕೈಗೊಳ್ಳುವಂತೆ ಕಂದಾಯ ಮತ್ತು ಕೃಷಿ ಇಲಾಖೆಗಳ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು. ಸಂದರ್ಭದಲ್ಲಿ ತಾಲೂಕ ಮಟ್ಟದ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಮುಖಂಡರು ರೈತರು ಭಾಗವಹಿಸಿದ್ದರು