ಹುಮ್ನಾಬಾದ್: ನ. 27ರಂದು ಪಂಚ್ ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ : ನಗರದಲ್ಲಿ ಗ್ಯಾರಂಟಿ ಸಮಿತಿ ಕಾರ್ಯದರ್ಶಿ ದೀಪಿಕಾ ನಾಯ್ಕರ್
Homnabad, Bidar | Nov 19, 2025 ನವೆಂಬರ್ 27ರಂದು ಬೆಳಿಗ್ಗೆ 11ಕ್ಕೆ ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕು ಮಟ್ಟದ ಪ್ರಗತಿ ಪರಿಶೀಲನ ಸಭೆ ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಕಾರ್ಯದರ್ಶಿ ದೀಪಿಕಾ ನಾಯ್ಕರ್ ತಿಳಿಸಿದ್ದಾರೆ. ಸಭೆ ಹಿನ್ನೆಲೆಯಲ್ಲಿ ಬುಧವಾರ ಸಂಜೆ 5ಕ್ಕೆ ಹೊರಡಿಸಿರುವ ಪ್ರಕಟಣೆಯ ಮೂಲಕ ಮಾಹಿತಿ ನೀಡಿರುವ ಅವರು ಪಂಚ ಗ್ಯಾರಂಟಿ ಅನುಷ್ಠಾನ ಅಧಿಕಾರಿಗಳು ತಮ್ಮ ಅನುಪಾಲನಾ ವರದಿಯನ್ನು ನ. 24ರಂದು ಮಧ್ಯಾಹ್ನ 1ಗಂಟೆಯೊಳಗಾಗಿ ಸಲ್ಲಿಸಲು ಸೂಚಿಸಿದ್ದಾರೆ.