ಮಡಿಕೇರಿ: ಮಡಿಕೇರಿ ಗಾಂಧಿ ಮೈದಾನದಲ್ಲಿ ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ
ದಸರಾ ಹಬ್ಬದ ನಂತರ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು. ಸ್ವಚ್ಛತೆಯನ್ನು ಕೇವಲ ಪೌರಕಾರ್ಮಿಕರ ಕೆಲಸ ಎಂದು ಭಾವಿಸದೆ, ವರ್ಷದ ಎಲ್ಲಾ ದಿನಗಳಲ್ಲೂ ಪ್ರತಿಯೊಬ್ಬ ನಾಗರಿಕನೂ ಪರಿಸರ ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು ಶಾಸಕರು ಕರೆ ನೀಡಿದರು.