ಬೆಂಗಳೂರಿನಲ್ಲಿ ಕಳೆದ ತಿಂಗಳು ನಡೆದ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಆಸ್ತಿ ವಿಚಾರವಾಗಿ ಸ್ವತಃ ಕಿರಿಯ ಸಹೋದರ ವೆಂಕಟೇಶ್, ತನ್ನ ಸಹೋದರಿ ತಂಗಮಣಿ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ್ದಾನೆ. ತಂಗಮಣಿ ತನ್ನ ತಂದೆಯನ್ನು ನೋಡಲು ಹೋದಾಗ ಈ ಘಟನೆ ನಡೆದಿದೆ. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.