ಹೊಸಕೋಟೆ: ಕೆಂಬಾಡಿಗನಹಳ್ಳಿಯಲ್ಲಿ ಪೂಜಮ್ಮ ದೇವಿಯ ಕರಗ ಮಹೋತ್ಸವ
ದೊಡ್ಡಬಳ್ಳಾಪುರ ತಾಲ್ಲೂಕು ವೀರಶೈವ ಸೇವಾ ಅಭಿವೃದ್ಧಿ ಟ್ರಸ್ಟ್ (ರಿ). ಇದರ ವತಿಯಿಂದ ದೊಡ್ಡಬಳ್ಳಾಪುರದ ಬಸವ ಭವನದಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀಮದ್ ರಂಭಾಪುರಿ ಖಾಸ ಶಾಖಾಮಠ ಸಿದ್ದರಬೆಟ್ಟದ ಬಾಳೆಹೊನ್ನೂರು ಮಠದ ಶ್ರೀ ಷ. ಬ್ರ. ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಪ್ರತಿಭಾ ಪುರಸ್ಕಾರ ನೆರವೇರಿಸಿ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ನ ಗೌರವಾಧ್ಯಕ್ಷರಾದ ಶ್ರೀ ಹೆಚ್. ಜೆ. ರಾಜೇಂದ್ರ, ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.