ಚಾಮರಾಜನಗರ: ನುಡಿದಂತೆ ನಡೆದ ಸರ್ಕಾರ ನಮ್ಮದು : ನಗರದಲ್ಲಿ ಗ್ಯಾರಂಟಿ ಯೋಜನೆಗಳ ರಾಜ್ಯಾಧ್ಯಕ್ಷ ಎಚ್.ಎಂ. ರೇವಣ್ಣ
ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ರಾಜ್ಯದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಮೂಲಕ ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಅವರು ತಿಳಿಸಿದರು. ಚಾಮರಾಜನಗರದ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಕಾರ್ಯಗಾರ ಹಾಗೂ ಪ್ರಗತಿ ಪರಿಶೀಲನಾ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.