ದೇವದುರ್ಗ: ಪಟ್ಟಣದಲ್ಲಿ ಮಟಕಾ ನಡೆಸುತ್ತಿದ್ದ ಆರೋಪ ಬಸವರಾಜ್ ಎಂಬುವನನ್ನು ವಶಕ್ಕೆ ಪಡೆದ ಪೊಲೀಸರು
ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ಮಟಕಾ ಮತ್ತು ಜೂಜಾಟ ನಡೆಸುತ್ತಿದ್ದಾನೆ ಎನ್ನುವ ಆರೋಪದ ಮೇಲೆ ಬಸವರಾಜ ಅನುಭವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಗುರುವಾರ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಸಾರ್ವಜನಿಕ ಸ್ಥಳದಲ್ಲಿ ಮಟಕಾ ಚೀಟಿ ಬರೆದುಕೊಳ್ಳುತ್ತಿದ್ದಾನೆ ಎನ್ನುವ ಆರೋಪದ ಮೇಲೆ ಬಸವರಾಜನನ್ನು ವಶಕ್ಕೆ ಪಡೆದಾಗ 1240 ರೂಪಾಯಿ ಹಾಗೂ ಒಂದು ಪೆನ್ ವಶಪಡಿಸಿಕೊಳ್ಳಲಾಗಿದ್ದು ಈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.