ಸಿರಗುಪ್ಪ: ತಾಲೂಕಿನ ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿ ದೊಡ್ಡರಾಜ್ ಕ್ಯಾಂಪ್ ನಲ್ಲಿ ಕೌಟುಂಬಿಕ ಕಲಹ-ದಂಪತಿಗಳು ನೇಣಿಗೆ ಶರಣು
ಕುಟುಂಬ ಕಲಹದ ಹಿನ್ನೆಲೆಯಲ್ಲಿ ದಂಪತಿಗಳು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಸಿರಿಗೇರಿ ಪೊಲೀಸ್ ಠಾಣೆ ವ್ಯಾಪ್ತಿ ದೊಡ್ಡರಾಜ್ ಕ್ಯಾಂಪ್ನಲ್ಲಿ ಭಾನುವಾರ ಬೆಳಿಗ್ಗೆ 6ಗಂಟೆಗೆ ನಡೆದಿದೆ. ದೊಡ್ಡರಾಜ್ ಕ್ಯಾಂಪ್ ನಅಂಬರೀಶ್ ವಯಸ್ಸು 24 ವರ್ಷ. ಶೃತಿ ವಯಸ್ಸು 20 ವರ್ಷ ಎಂಬುವರು ಆತ್ಮಹತ್ಯೆಗೆ ಶರಣಾದವರು. ಮೃತ ದೇಹಗಳು ಕಂಪ್ಲಿ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಸಾಗಿಸಲಾಗಿದೆ. ಒಂದು ವರ್ಷದ ಹಿಂದಷ್ಟೆ ಇವರು ಮದುವೆಯಾಗಿದ್ದರು ಎನ್ನಲಾಗುತ್ತಿದೆ. ಈ ದಂಪತಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.ಕಂಪ್ಲಿ ಆಸ್ಪತ್ರೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.