ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ತಡೆಯಲು ಪೊಲೀಸರೊಂದಿಗೆ ಸಹಕರಿಸಿ ಸಾರ್ವಜನಿಕರಿಗೆ ಪೊಲೀಸ್ ಎಸ್‌ಪಿ ಮನವಿ
ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ತಡೆಯಲು ಪೊಲೀಸರೊಂದಿಗೆ ಸಾರ್ವಜನಿಕರ ಸಹಕಾರ ಅತಿ ಅಗತ್ಯ ಎಂದು ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸಿ ಹೇಳಿದರು. ಅವರು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಅಧಿಕಾರಿಗಳ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಇಂದು ಗುರುವಾರ ಬೆಳಗ್ಗೆ 11:30 ಗಂಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಜಿಲ್ಲೆಯಾದ್ಯಂತ ಯಾವುದೇ ಅಪರಾಧ ಪ್ರಕರಣಗಳು ನಡೆಯದಂತೆ ಪೊಲೀಸರು ಕಟ್ಟೆಚರ ವಹಿಸುವಂತೆ ಈಗಾಗಲೇ ಸೂಚಿಸಲಾಗಿದೆ ಅದರಂತೆ ಯಾವುದೇ ಪ್ರಕರಣಗಳು ನಡೆಯದೆ ಇರಲು ಸಾರ್ವಜನಿಕರ ಸಹಕಾರ ಅತಿ ಮುಖ್ಯ ಎಂದರು.