ನಟಿ ಕಾರುಣ್ಯ ರಾಮ್ ಅವರು ತಮ್ಮ ಸಹೋದರಿ ವಿರುದ್ಧ ನೀಡಿದ್ದ ದೂರಿನ ಪ್ರಕರಣಕ್ಕೆ ಸಂಬಂಧಿಸಿ ಶುಕ್ರವಾರ ಸಿಸಿಬಿ ಸೈಬರ್ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇನ್ಸ್‌ಪೆಕ್ಟರ್ ಮುಖರಾಮ್ ಅವರ ಮುಂದೆ ವಿಚಾರಣೆ ನಡೆದಿದ್ದು, ಕಾರುಣ್ಯ ರಾಮ್ ಅವರು ಪ್ರಕರಣದ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಚಾರಣೆ ಮುಗಿಸಿ ಹೊರಟ ನಟಿ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಸಂಕ್ರಾಂತಿ ಹಬ್ಬದಂದು ಸಹೋದರಿಯ ಕುರಿತು ವಿಡಿಯೋ ಮಾಡಿ ದೂರು ನೀಡಿದ್ದರು.