ಚಿತ್ರದುರ್ಗದ ಮಹಾರಾಣಿ ಪ್ರೌಢಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣಾ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಬುದವಾರ ಮಧ್ಯಾಹ್ನ 12 ಗಂಟೆಗೆ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಸಮಾಜ ವಿಜ್ಞಾನ ವಿಷಯ ಎಸ್‍ಎಸ್‍ಎಲ್‍ಸಿ ಫಲಿತಾಂಶ ಸುಧಾರಣಾ ಕಾರ್ಯಾಗಾರ ಹಮ್ಮಿಕೊಂಡಿದ್ದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ್ ಅವರು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ್ದು ನಿಧಾನಗತಿಯ ಮಕ್ಕಳಿಗೆ ವಿಶೇಷ ಗಮನಹರಿಸುವ ಮೂಲಕ ಎಸ್‍ಎಸ್‍ಎಲ್‍ಸಿ ಫಲಿತಾಂಶ ಉತ್ತಮಗೊಳಿಸಬೇಕು ಎಂದು ಹೇಳಿದರು