ಬಳ್ಳಾರಿ:ಬಳ್ಳಾರಿ ಮಹಾನಗರ ಪಾಲಿಕೆಯ ವತಿಯಿಂದ ಮಂಗಳವಾರ ಮಧ್ಯಾಹ್ನ 12ಗಂಟೆಗೆ ಪಾಲಿಕೆಯ ಸಭಾಂಗಣದಲ್ಲಿ ಮುಂದಿನ ವರ್ಷದ (2026-27ರ) ಬಜೆಟ್ ರೂಪಿಸುವ ಬಗ್ಗೆ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಪಾಲಿಕೆಯ ಮೇಯರ್ ಪಿ.ಗಾದೆಪ್ಪ , ಆಯುಕ್ತ ಪಿ.ಎಸ್.ಮಂಜುನಾಥ್ ಸೇರಿದಂತೆ ಇತರೆ ಅಧಿಕಾರಿಗಳು ಹಾಗೂ ವಿವಿಧ ಸಂಘ-ಸAಸ್ಥೆಗಳ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಸಂಘ-ಸAಸ್ಥೆಗಳ ಪ್ರತಿನಿಧಿಗಳು, ಬಳ್ಳಾರಿಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಳ್ಳಬೇಕಾದ ಕಾರ್ಯ, ಪಾಲಿಕೆಯ ಆದಾಯ ಹೆಚ್ಚಳ, ಕಟ್ಟುನಿಟ್ಟಾಗಿ ತೆರಿಗೆ ವಸೂಲಿ, ಪರಿಸರ ಸಂರಕ್ಷಣೆಗೆ ಪ್ಲಾಸ್ಟಿಕ್ ಬಳಕೆ ನಿಯಂತ್ರಣ, ವಿವಿಧ ರಸ್ತೆ, ಸರ್ಕಲ್ಗಳಲ್ಲಿ ಪಾದಚಾರಿ ಮ