ಬೀಳಗಿ: ಪಟ್ಟಣದಲ್ಲಿ ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣಪತ್ರ ನೀಡುವುದನ್ನ ಖಂಡಿಸಿ ಬೃಹತ್ ಪ್ರತಿಭಟನೆ
Bilgi, Bagalkot | Sep 25, 2025 ನಕಲಿ ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ ನೀಡುವುದನ್ನು ಖಂಡಿಸಿ ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿಂದು ಪ್ರತಿಭಟನೆ ನಡೆಸಲಾಯಿತು.ಪರಿಶಿಷ್ಟ ಪಂಗಡದ ಸಮಾಜ ಬಾಂಧವರು ಬೀಳಗಿ ಪಟ್ಟಣದ ವೀರ ಸಿಂಧೂರ ಲಕ್ಷ್ಮಣ ವೃತ್ತದಿಂದ ತಹಶೀಲ್ದಾರ್ ಕಚೇರಿ ವರೆಗೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.ನಂತರ ಸೂಕ್ತ ಕ್ರಮಕ್ಕೆ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.ಬಳಿಕ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ನಾಯಕ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಟಿ.ವಾಯ್.ಜಾನಮಟ್ಟಿ ಮಾತನಾಡಿ, ಅನ್ಯ ಜಾತಿಯವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಹುನ್ನಾರವನ್ನು ತಡೆಗಟ್ಟಬೇಕು ಎಂದು ಇತ್ತಾಯಿಸಿದರು.