ಚಾಮರಾಜನಗರ: ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಕವರ್ ಗಳನ್ನು ವಶಕ್ಕೆ ಪಡೆದು, ಅರಿವು ಮೂಡಿಸಿದ ಪೌರಾಯುಕ್ತ ರಾಮದಾಸ್
ಚಾಮರಾಜನಗರದಲ್ಲಿ ದೊಡ್ಡ ಅಂಗಡಿ ಬೀದಿ, ಹಳೇ ಖಾಸಗಿ ಬಸ್ ನಿಲ್ದಾಣದಲ್ಲಿ ಬೀದಿ ಬದಿ ವ್ಯಾಪಾರಿಗಳು ಹಾಗೂ ಅಂಗಡಿಗಳ ಮೇಲೆ ನಗರಸಭೆ ಪೌರಾಯುಕ್ತ ರಾಮದಾಸ್ ಹಾಗೂ ಆರೋಗ್ಯ ಶಾಖೆ ಅಧಿಕಾರಗಳು ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್ ಕವರ್ ಗಳನ್ನು ವಶಕ್ಕೆ ಪಡೆಯಲಾಯಿತು. ಬಳಿಕ ಬೀದಿ ಬದಿ ವ್ಯಾಪಾರಿಗಳಿಗೆ ಹಾಗೂ ಅಂಗಡಿ ಮಾಲೀಕರಿಗೆ ದಂಡ ವಿಧಿಸದೇ ನಿಷೇಧಿತ ಪ್ಲಾಸ್ಟಿಕ್ ಕವರ್ ಗಳನ್ನು ಮತ್ತೆ ಬಳಸ ಬೇಡಿ ಎಂದು ಅರಿವು ಮೂಡಿದರು. ಈ ಸಂದರ್ಭದಲ್ಲಿ ಆರೋಗ್ಯ ಶಾಖೆಯ ಅಧಿಕಾರಿ ಮಂಜು ಇದ್ದರು