ಶಿವಮೊಗ್ಗ: ಗಣಪತಿ ವಿಸರ್ಜನಾ ಮೆರವಣಿಗೆ ಹಾಗೂ ಈದ್ ಮಿಲಾದ್ ಮೆರವಣಿಗೆ ವೇಳೆ ಡಿಜೆ ಬಳಕೆ: ಶಿವಮೊಗ್ಗ ಜಿಲ್ಲೆಯಾದ್ಯಂತ 55 ಪ್ರಕರಣ ದಾಖಲು
ಶಿವಮೊಗ್ಗ ಜಿಲ್ಲೆಯಾದ್ಯಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ಮತ್ತು ಈದ್ ಮಿಲಾದ್ ಮೆರವಣಿಗೆಯ ವೇಳೆ ನಿಗದಿತ ಶಬ್ದದ ಮಿತಿ ನಿಯಮ ಉಲ್ಲಂಘಿಸಿ ಶಬ್ದ ಮಾಲಿನ್ಯ ಉಂಟು ಮಾಡಿ ಸಾರ್ವಜನಿಕರಿಗೆ ತೊಂದರೆಯಾಗುವ ರೀತಿಯಲ್ಲಿ ಡಿಜೆ ಬಳಕೆ ಮಾಡಿದವರ ವಿರುದ್ಧ ವಿವಿಧ ಕಾಯ್ದೆ ಅಡಿಯಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 55 ಪ್ರಕರಣ ದಾಖಲಿಸಿದ್ದು, ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬುಧವಾರ ಪೊಲೀಸ್ ಇಲಾಖೆ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ