ರಾಯಚೂರು: ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ; ಮುಂದಿನ 10 ದಿನಗಳಲ್ಲಿ 5000 ಶಿಕ್ಷಕರ ನೇಮಕಕ್ಕೆ ಸಂಪುಟ ತೀರ್ಮಾನ
ಮಾನ್ವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಿರೇಕೊಟ್ನೆಕಲ್ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದ ಕಟ್ಟಡ ಕಾಮಗಾರಿಗೆ ಭೂಮಿ ಪೂಜೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಸೆ.27 ರ ಶನಿವಾರ ಸಂಜೆ 5 ಗಂಟೆಗೆ ನೆರವೇರಿಸಿದರು. ನಂತರ ಮಾತನಾಡಿದ ಅವರು,ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಕ್ಷೇತ್ರದ ಕೊರತೆ ನೀಗಿಸಲು ಮುಂದಿನ 10 ದಿನಗಳ ಒಳಗಾಗಿ 5000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಘೋಷಿಸಿದರು. ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಭಾಗಕ್ಕೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಈ ಭಾಗದ ಅಭಿವೃದ್ಧಿಗೆ ನಂಜುಂಡಪ್ಪನವರ ವರದಿ ಆಧರಿಸಿ ವಾರ್ಷಿಕ ಬಜೆಟ್‌ನಲ್ಲಿ 5000 ಕೋಟಿ ರೂಪಾಯಿಗಳನ್ನು