ಶಿರಸಿ: ಶಿರಸಿ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಶಾಸಕರಿಂದ ನಾರಿ ಶಕ್ತಿ ಯೋಜನೆ ಸಂಭ್ರಮಾಚರಣೆ : ಪೌಷ್ಠಿಕ ಆಹಾರ ಘಟಕ, ಸಗಟು ಮಳಿಗೆಗೆ ಭೇಟಿ
ಶಿರಸಿ : ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ನಾರಿ ಶಕ್ತಿ ಯೋಜನೆಯ ಸಂಭ್ರಮಾಚರಣೆಯನ್ನು ಶಾಸಕ ಭೀಮಣ್ಣ ಟಿ ನಾಯ್ಕ ಶಿರಸಿ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಬಸ್ ಗೆ ಪೂಜೆ ಸಲ್ಲಿಸಿ ಸಿಹಿ ಹಂಚುವ ಮೂಲಕ ಸೋಮವಾರ ಆಚರಣೆ ಮಾಡಿದರು. ತದನಂತರ ಬಸ್ ಏರಿ ಪ್ರಯಾಣಿಕರಿಗೆ ಟಿಕೆಟ್ ನೀಡಿ ಬಸ್ ನಲ್ಲಿ ಪ್ರಯಾಣಿಸಿದರು .ಈ ಸಂದರ್ಭದಲ್ಲಿ ಮಾತನಾಡಿದ ಅವರು ಗ್ಯಾರಂಟಿ ಯೋಜನೆಯ ಅರಂಭದಿಂದ ಇಲ್ಲಿಯವರಗೆ ಸುಮಾರು 500 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಮಾಡಿದ್ದಾರೆ.ಈ ಯೋಜನೆಯಿಂದ ಬಹಳಷ್ಟು ಮಹಿಳೆಯರು ತಮ್ಮ ಜೀವನವನ್ನು ಕಟ್ಟಿಕೊಂಡಿದ್ದಾರೆಂದು ಹೇಳಿದರು.