ಔರಾದ್: ಮೂಲ ಸೌಲಭ್ಯ ಕಲ್ಪಿಸುವುದು ನನ್ನ ಜವಾಬ್ದಾರಿ ಗುಣಮಟ್ಟದ ಶಿಕ್ಷಣ ನೀಡುವುದು ನಿಮ್ಮ ಕರ್ತವ್ಯ: ಪಟ್ಟಣದಲ್ಲಿ ಶಾಸಕ ಪ್ರಭು ಚೌಹಾಣ್
Aurad, Bidar | Nov 11, 2025 ಮಹಾವಿದ್ಯಾಲಯಕ್ಕೆ ಮೂಲ ಸೌಲಭ್ಯ ಕಲ್ಪಿಸುವುದು ನನ್ನ ಜವಾಬ್ದಾರಿ, ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ನೀಡುವುದು ನಿಮ್ಮ ಕರ್ತವ್ಯ ಈ ನಿಟ್ಟಿನಲ್ಲಿ ಎಲ್ಲರೂ ಜವಾಬ್ದಾರಿ ಕರ್ತವ್ಯ ನಿರ್ವಹಿಸಬೇಕು ಎಂದು ಶಾಸಕ ಪ್ರಭು ಚೌಹಾಣ್ ಸಲಹೆ ನೀಡಿದರು. ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಂಗಳವಾರ ಮಧ್ಯಾನ 2:30ಕ್ಕೆ ಏರ್ಪಡಿಸಿದ್ದ ಮಹಾ ವಿದ್ಯಾಲಯದ ವಿವಿಧ ಚಟುವಟಿಕೆ ಉದ್ಘಾಟಿಸಿ ಮಾತನಾಡಿ ವಿವಿಧ ಪರಿಕರಕ್ಕಾಗಿ ₹40ಲಕ್ಷ ಮೀಸಲು ಇರಿಸಲಾಗಿದೆ ಎಂದರು.