ಯಳಂದೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಮದ್ದೂರು ಗ್ರಾಮದಲ್ಲಿ ಬೆಂಕಿ ಅವಘಡ, ಅರ್ಧ ಮನೆ ಭಸ್ಮ
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮದ್ದೂರು ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಇದರಿಂದಾಗಿ ಅರ್ಧ ಮನೆ ಭಸ್ಮವಾಗಿರುವ ದುರ್ಘಟನೆ ನಡೆದಿದೆ. ಮದ್ದೂರು ಗ್ರಾಮದ ಮಂಜು ಎಂಬುವವರಿಗೆ ಸೇರಿದ ಮನೆದಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡಿದ್ದು, ಮನೆಯೊಳಗಿದ್ದ ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಈ ವೇಳೆ ಕುಟುಂಬಸ್ಥರು ಸಂಕಷ್ಟದಲ್ಲಿ ಸಿಲುಕಿದ್ದು, ತಕ್ಷಣ ನೆರವಿಗೆ ಮನವಿ ಮಾಡಲಾಗಿದೆ.ಘಟನೆಯಿಂದಾಗಿ ಆರ್ಥಿಕ ನಷ್ಟ ಸಂಭವಿಸಿದ್ದು, ಘಟನೆಯ ಬೆನ್ನಲ್ಲೆ ಸ್ಥಳೀಯರು ಸ್ಥಳಕ್ಜೆ ಧಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು