ವಿಜಯಪುರ: ನಗರದಲ್ಲಿ ಮಾದಕ ದ್ರವ್ಯ ಸೇವನೆ ಕಡಿವಾಣಕ್ಕೆ ಮಹತ್ವದ ಸಭೆ ನಡೆಸಿದ ಜಿಲ್ಲಾಧಿಕಾರಿ ಆನಂದ್ ಕೆ
ಜಿಲ್ಲೆಯಲ್ಲಿ ಮಾದಕ ದ್ರವ್ಯ ಕಡಿವಾಣಕ್ಕೆ ಹಾಗೂ ಮಾದಕ ದ್ರವ್ಯ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಆಂಟಿ ಡ್ರಗ್ ಕಮಿಟಿ ಸ್ಥಾಪಿಸಿ ಜಿಲ್ಲೆಯ ಪ್ರತಿಯೊಂದು ಶಾಲಾ ಕಾಲೇಜುಗಳಲ್ಲಿ ಜಾಗೃತಿ ಮೂಡಿಸುವಂತಹ ಕೆಲಸ ಅಧಿಕಾರಿಗಳು ಮಾಡಬೇಕು ಎಂದು ವಿಜಯಪುರದಲ್ಲಿ ಬುದುವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಜಿಲ್ಲಾಧಿಕಾರಿ ಆನಂದ್ ಕೆ ಸೂಚನೆ ನೀಡಿದರು. ಅಧಿಕಾರಿಗಳು ಶಾಲಾ ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯದಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.