ಹುಬ್ಬಳ್ಳಿ: ನವೆಂಬರ್ 14ರಂದು ಹುಬ್ಬಳ್ಳಿಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯ ಉಣಕಲ್ ಕ್ರಾಸ್ ನಲ್ಲಿರುವ ಕೆ. ಎಲ್. ಇ ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿ. ಎ. ಕೆ ಫೌಂಡೇಶನ್ ವತಿಯಿಂದ ಈ ಮೇಳ ಆಯೋಜಿಸಲಾಗಿದೆ. ಉದ್ಯೋಗಾಕಾಂಕ್ಷಿಗಳು ಈ ಮೇಳದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.