ಭದ್ರಾವತಿ: ನಗರ, ಗ್ರಾಮೀಣ ಪ್ರದೇಶದಲ್ಲಿ ಮುಸ್ಲಿಮರಿಂದ ರಂಜಾನ್ ಹಬ್ಬ ಆಚರಣೆ
ಭದ್ರಾವತಿ ತಾಲ್ಲೂಕಿನ ನಗರ, ಗ್ರಾಮೀಣ ಪ್ರದೇಶದಲ್ಲಿ ಮುಸ್ಲಿಮರಿಂದ ರಂಜಾನ್ ಹಬ್ಬವನ್ನು ಪ್ರಾರ್ಥನೆ ಸಲ್ಲಿಸುವ ಮೂಲಕ ಶಾಂತ ರೀತಿಯಲ್ಲಿ ಆಚರಿಸಲಾಯಿತು. ಶಾಸಕ ಬಿ.ಕೆ.ಸಂಗಮೇಶ್ ಸೇರಿದಂತೆ ಉದ್ಯಮಿಗಳಾದ ಬಿಕೆ ಜಗನ್ನಾಥ್, ವಿವಿಧ ಸಮಾಜದ ಮುಖಂಡರು, ಗಣ್ಯರು ರಂಜಾನ್ ಹಬ್ಬದ ಪ್ರಾರ್ಥನೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮುಸ್ಲಿಂ ಸಮಾಜದಿಂದ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರಿಗೆ ಸನ್ಮಾನಿಸಿ ಗೌರವಿಸಲಾಯಿತು.