ಅಪರಾಧ ನ್ಯಾಯ ವ್ಯವಸ್ಥೆಯಲ್ಲಿ ಅಭಿಯೋಜಕರ ಪಾತ್ರ ಬಹುಮುಖ್ಯವಾಗಿದೆ ಎಂದು ಬಳ್ಳಾರಿ ವಲಯ ಪೊಲೀಸ್ ಉಪ ಮಹಾನಿರೀಕ್ಷಕರಾದ ವರ್ತಿಕಾ ಕಟಿಯಾರ್ ಅವರು ಹೇಳಿದರು. ಶನಿವಾರ ಮಧ್ಯಾಹ್ನ 12ಗಂಟೆಗೆ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಬೆಂಗಳೂರು ಇವರ ಆಶ್ರಯದಲ್ಲಿ ನಗರದ ಹಳೆಯ ನ್ಯಾಯಾಲಯ ಆವರಣದ ಅಭಿಯೋಜಕ ಭವನದಲ್ಲಿ ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯ ನೂತನ ಕಾನೂನು ಅಧಿಕಾರಿ (ಹಿರಿಯ) ಯವರ ಬಳ್ಳಾರಿ ವಿಭಾಗೀಯ ಕಚೇರಿಯ ಉದ್ಘಾಟನೆ ನೆರವೇರಿಸಿ ಬಳಿಕ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಅಭಿಯೋಜಕರು ಮತ್ತು ತನಿಖಾಧಿಕಾರಿಗಳ ನಡುವೆ ಸಮನ್ವಯತೆ ಸಾಧಿಸಬೇಕು. ತನಿಖಾಧಿಕಾರಿಗಳು ಯಾವ ರೀತಿಯಾಗಿ ದೋಷರೋಪಣಾ ಪಟ್ಟಿ ತಯಾರಿಸಬೇಕು. ಅದಕ್ಕಿರುವ ಕಾನೂನು ಕ್ರಮ ಹಾಗೂ ಇತರೆ ಕುರಿತಂತೆ ಪೊಲೀಸ