ಶಿವಮೊಗ್ಗ: ನಗರದಲ್ಲಿ ಆರ್ಯವೈಶ್ಯ ಮಹಾಜನ ಸಮಿತಿ ಶತಮಾನೋತ್ಸವದ ಅಂಗವಾಗಿ "ಶೆಟ್ಟರ ಸಂತೆ" ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಎಸ್ಎನ್ ಚೆನ್ನಬಸಪ್ಪ
ಶಿವಮೊಗ್ಗ ನಗರ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ಇಂದು ಶಿವಮೊಗ್ಗದ ವಿನಾಯಕ ನಗರದಲ್ಲಿರುವ ನವ್ಯಶ್ರೀ ಸಭಾಂಗಣದಲ್ಲಿ ನಡೆಯುತ್ತಿರುವ ಆರ್ಯವೈಶ್ಯ ಮಹಾಜನ ಸಮಿತಿ (ರಿ) ಶತಮಾನೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ "ಶೆಟ್ಟರ ಸಂತೆ" ಎಂಬ ವಿನೂತನ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಭಾಗವಹಿಸಿ ಉದ್ಘಾಟನೆಯನ್ನು ನೆರವೇರಿಸಿಕೊಟ್ಟರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ಅವರು ಉದ್ಘಾಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು ಸ್ವದೇಶೀ ಉತ್ಪನ್ನಗಳಿಗೆ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಹೆಚ್ಚಿನ ಮಾನ್ಯತೆ ಲಭಿಸುತ್ತಿದ್ದು ಇನ್ನೂ ಹೆಚ್ಚಿನ ಉತ್ಪನ್ನಗಳನ್ನು ಉತ್ಪಾದಿಸಿ ಮಾರುಕಟ್ಟೆಯಲ್ಲಿ ತಮ್ಮದೇ ಛಾಪು ಮೂಡಿಸಬೇಕು ಎಂದರು.