ವಡಗೂರು ಗ್ರಾಪಂ ಅಧ್ಯಕ್ಷರಾಗಿ ಲಕ್ಷ್ಮಮ್ಮ ನಾಗರಾಜ್ ಅವಿರೋಧ ಆಯ್ಕೆ ಕೋಲಾರ : ತಾಲ್ಲೂಕಿನ ವಡಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸತತ ಎರಡನೇ ಬಾರಿಯೂ ಸಹ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನವು ಕಾಂಗ್ರೆಸ್ ಬೆಂಬಲಿತ ವಡಗೂರು ಗ್ರಾಮದ ಪರಿಶಿಷ್ಟ ಮೀಸಲಾತಿಯಲ್ಲಿ ಆಯ್ಕೆಯಾಗಿದ್ದ ಲಕ್ಷ್ಮಮ್ಮ ನಾಗರಾಜ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಹಿಂದೆ ಅಧ್ಯಕ್ಷರಾಗಿದ್ದ ಸುಮಿತ್ರ ಚಂದ್ರಪ್ಪ ಅವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಶುಕ್ರವಾರ ಚುನಾವಣೆ ನಿಗದಿಯಾಗಿತ್ತು ಬಂಗಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೀಸಂದ್ರ ಗೋಪಾಲಗೌಡ, ಹಾಗೂ ರಾಜ್ಯ ಬೀಜ ನಿಗಮದ ನಿರ್ದೇಶಕ ವಡಗೂರು ಡಿ.ಎಲ್ ನಾಗರಾಜ್ ಅವರ ನೇತೃತ್ವದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಲ