ಮಂಡ್ಯ: ಹೈಕಮಾಂಡ್ ನಿರ್ದೇಶನದಂತೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ: ನಗರದಲ್ಲಿ ಸಚಿವ ಎನ್.ಚಲುವರಾಯಸ್ವಾಮಿ
Mandya, Mandya | Oct 28, 2025 ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಕಾಂಗ್ರೆಸ್ ಹೈಕಮಾಂಡ್ ನಿರ್ದೇಶನದಂತೆ ಜರುಗಲಿದೆ ಎಂದು ಸಚಿವ ಎನ್.ಚಲುವರಾಯಸ್ವಾಮಿ ಸ್ಪಷ್ಟಪಡಿಸಿದರು. ಮಂಗಳವಾರ ನಗರದಲ್ಲ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕರು ಹಾಗೂ ಹೈಕಮಾಂಡ್ ಜೊತೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸಮಾಲೋಚನೆ ನಡೆಸಿ ಮುಂದಿನ ಕ್ರಮ ವಹಿಸಲಿದ್ದಾರೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ವಿವರಿಸಿದರು. ಬಿಹಾರ್ ಚುನಾವಣೆ ಬಳಿಕ ಸಂಪುಟ ಪುನರಚನೆ ಹಾಗೂ ನಾಯಕತ್ವ ಬದಲಾವಣೆ ಬಗ್ಗೆ ತಿಳಿಯಲಿದೆ ಎಂದು ಸ್ಪಷ್ಟ ಮಾಹಿತಿ ನೀಡಲು ನಿರಾಕರಿಸಿದರು. ಬಿಜೆಪಿಯವರು ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ ಅವರ ರ್ಯಾಲಿಗಳನ್ನು ಬೆಂಬಲಿಸಿ ಲಾರಿಗಳನ್ನು ಬಿಜೆಪಿ ಕಾರ್ಯಕರ್ತರನ್ನು ಕಳುಹಿಸಿ ಗೊಂದಲ ಸೃಷ್ಟಿಸುತ್ತಾರೆ ಎಂದರು.