ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ @ ಅಪ್ಪು ಅವರ 4ನೇ ಪುಣ್ಯಸ್ಮರಣೆ ಹಿನ್ನಲೆಯಲ್ಲಿ ಮಂಡ್ಯದಲ್ಲಿ ಬೃಹತ್ ರಕ್ತದಾನ ಶಿಬಿರ ಏರ್ಪಡಿಸಲಾಗಿತ್ತು. ಬುಧವಾರ ನಗರದ ಗಾಂಧಿ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಡಾ.ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಹಾಗೂ ಜೀವಧಾರೆ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿತ್ತು. ಜ್ಯೋತಿ ಬೆಳಗುವ ಮೂಲಕ ಬೃಹತ್ ರಕ್ತದಾನ ಶಿಬಿರವನ್ನು ಡಿ.ಸಿ ಡಾ.ಕುಮಾರ ಉದ್ಘಾಟಿಸಿದರು. ಅಪ್ಪು ಭಾವಚಿತ್ರಕ್ಕೆ ಶಾಸಕ ಗಣಿಗ ರವಿಕುಮಾರ್ ಹಾಗೂ ಗಣ್ಯರು ಪುಷ್ಪಾರ್ಚನೆ ಸಲ್ಲಿಸಿದರು. ಇದೇ ವೇಳೆ ರಕ್ತದಾನಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ರಕ್ತದಾನ ಶಿಬಿರದಲ್ಲಿ ಭಾಗಿಯಾಗಿ ನೂರಾರು ಅಪ್ಪು ಅಭಿಮಾನಿಗಳು ರಕ್ತದಾನ ಮಾಡಿದರು.