ಹಾಸನ: ನಗರದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ ಬಸವ ಸಂಸ್ಕೃತಿ ಅಭಿಯಾನದಲ್ಲಿ ಧರ್ಮ ದಂಗಲ್ : ಗದ್ದಲ
Hassan, Hassan | Sep 22, 2025 ನಗರದ ಹಾಸನಂಬ ಕಲಾ ಕ್ಷೇತ್ರದಲ್ಲಿ ಭಾನುವಾರ ರಾತ್ರಿ 10 ಗಂಟೆವರೆಗೂ ನಡೆದ ಬಸವ ಸಂಸ್ಕೃತಿ ಅಭಿಯಾನದ ಕಾರ್ಯಕ್ರಮದಲ್ಲಿ ಧರ್ಮ ದಂಗಲ್ ನಡೆದಿದೆ. ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಸಾನೇನಹಳ್ಳಿ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು, ರಾಜ್ಯ ಸರ್ಕಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭಿಸಿದ್ದು ಅದರಲ್ಲಿ ಧರ್ಮದ ಕಾಲಂನಲ್ಲಿ ಲಿಂಗಾಯಿತ ಎಂದು ನಮೂದಿಸಬೇಕು ಎಂದು ಹೇಳಿದರು.ಇದಕ್ಕೆ ವೇದಿಕೆಯಲ್ಲಿ ವಿರೋಧ ವ್ಯಕ್ತಪಡಿಸಿದ ಲಿಂಗಾಯಿತ ಸಮುದಾಯದ ಕೆಲ ಮುಖಂಡರು ಗಲಾಟೆಗೆ ಕಾರಣರಾದರು, ಇದರಿಂದ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಗಿ ಸ್ವಾಮೀಜಿಯವರು ಆಶೀರ್ವಚನ ಮಟಕುಗೊಳಿಸಿದರು.