ಬೆಂಗಳೂರು ಉತ್ತರ: ಕೇಂದ್ರ ಕನ್ನಡವನ್ನು ನಿರ್ಲಕ್ಷಿಸಿ ಹಿಂದಿ ಹೇರುತ್ತಿದೆ; ಆದ್ರೆ ರಾಜ್ಯದ ಮದರಸಗಳಲ್ಲೂ ಕನ್ನಡ ಕಲಿಕೆ; ಸಿದ್ದರಾಮಯ್ಯ
ಕೇಂದ್ರ ಸರ್ಕಾರ ಕನ್ನಡ ಭಾಷೆಯನ್ನು "ನಿರ್ಲಕ್ಷಿಸುತ್ತಿದೆ" ಮತ್ತು ಹಿಂದಿ ಹೇರಿಕೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಆರೋಪಿಸಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ, ಕನ್ನಡ ವಿರೋಧಿಗಳನ್ನು ತಿರಸ್ಕರಿಸುವಂತೆ ರಾಜ್ಯದ ಜನತೆಗೆ ಕರೆ ನೀಡಿದರು. ಕೇಂದ್ರ ಸರ್ಕಾರ, ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯವು ಕೇಂದ್ರಕ್ಕೆ 4.5 ಲಕ್ಷ ಕೋಟಿ ರೂಪಾಯಿ ಆದಾಯವನ್ನು ಒದಗಿಸುತ್ತಿದೆ. ಆದರೆ ನಮಗೆ ನ್ಯಾಯಯುತ ಪಾಲನ್ನು ನಿರಾಕರಿಸಲಾಗಿದೆ ಮತ್ತು ಅದಕ್ಕೆ ಪ್ರತಿಯಾಗಿ ಅಲ್ಪ ಮೊತ್ತವನ್ನು ನೀಡಲಾಗುತ್ತದೆ ಎಂದು ಸಿಎಂ ಆರೋಪಿಸಿದರು.