ಮಡಿಕೇರಿ: ಐತಿಹಾಸಿಕ ಮಡಿಕೇರಿ ದಸರಾಗೆ ವರ್ಣರಂಜಿತ ತೆರೆ: ರಾತ್ರಿಯಿಡೀ ನಡೆದ ದಶಮಂಟಪಗಳ ಶೋಭಾಯಾತ್ರೆ
ಐತಿಹಾಸಿಕ ಮಡಿಕೇರಿ ದಸರಾ ಮಹೋತ್ಸವವು ಅದ್ದೂರಿ ದಶಮಂಟಪಗಳ ಶೋಭಾಯಾತ್ರೆಯೊಂದಿಗೆ ಮುಕ್ತಾಯಗೊಂಡಿದೆ. ಪೌರಾಣಿಕ ಕಥಾ ಸಾರಂಶ ಸಾರುವ ಮಂಟಪಗಳು, ಬೆಳಕಿನ ಸಂಯೋಜನೆ ಮತ್ತು ಸಾಂಸ್ಕೃತಿಕ ವೈಭವವನ್ನು ಕಣ್ತುಂಬಿಕೊಳ್ಳಲು ಸಾವಿರಾರು ಪ್ರವಾಸಿಗರು ಮಡಿಕೇರಿಗೆ ಆಗಮಿಸಿದ್ದರು.