ಶಿರಸಿ ಉಪವಿಭಾಗಾಧಿಕಾರಿ ಕಾವ್ಯರಾಣಿ ವರ್ಗಾವಣೆಗೊಂಡಿದ್ದು ಭಟ್ಕಳದ ಪ್ರಭಾರ ಹೊಣೆಗಾರಿಕೆಯನ್ನು ನಿರ್ವಹಿಸುತ್ತಿದ್ದರು. ಶಿರಸಿ ಉಪವಿಭಾಗಾಧಿಕಾರಿಯಾಗಿ (AC) ಕರ್ತವ್ಯ ನಿರ್ವಹಿಸುತ್ತಿದ್ದ ಕಾವ್ಯ ರಾಣಿ ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅವರನ್ನು ಮೈಸೂರು ಜಿಲ್ಲೆಯ ಹುಣಸೂರು ಉಪವಿಭಾಗಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.