ದಾಂಡೇಲಿ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ದಾಂಡೇಲಿ ತಾಲೂಕು ಘಟಕದ 2026ನೇ ವರ್ಷದ ಕ್ಯಾಲೆಂಡರನ್ನು ಇಂದು ಸೋಮವಾರ ಮಧ್ಯಾಹ್ನ ಒಂದು ಗಂಟೆ ಸುಮಾರಿಗೆ ದಾಂಡೇಲಿಯ ಅರಣ್ಯ ಪ್ರವಾಸಿ ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು. ನಗರಸಭೆಯ ಪೌರಾಯುಕ್ತ ವಿವೇಕ ಬನ್ನೆ ನೂತನ ಕ್ಯಾಲೆಂಡರನ್ನು ಬಿಡುಗಡೆಗೊಳಿಸಿ ಮಾತನಾಡುತ್ತಾ, ದಾಂಡೇಲಿಯ ರಾಜ್ಯ ಸರಕಾರಿ ನೌಕರರ ಸಂಘವು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಾ ಬರುತ್ತಿದೆ. ಹಲವಾರು ಸಮಾಜಮುಖಿ ಕಾರ್ಯ ಚಟುವಟಿಕೆಗಳ ಮೂಲಕ ಗಮನ ಸೆಳೆದಿದೆ ಎಂದರು.