ಹನೂರು: ದೀಪಾವಳಿ ಜಾತ್ರೆ ಹಿನ್ನೆಲೆ ಜಗಮಗಿಸುತ್ತಿದೆ ಮಲೆಮಹದೇಶ್ವರ ಬೆಟ್ಟ- ನೋಡಿ ವೈವಿಧ್ಯಮಯ ದೀಪಾಲಂಕಾರ
ಪ್ರಸಿದ್ಧ ಧಾರ್ಮಿಕ ಸ್ಥಳವಾದ ಹನೂರು ತಾಲೂಕಿನ ಮಲೆ ಮಾದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆ ಪ್ರಯುಕ್ತ ಇಡೀ ಕ್ಷೇತ್ರ ವಿದ್ಯುತ್ ದೀಪಗಳಿಂದ ಝಗಮಗಿಸುತ್ತಿದೆ. ಮಾದಪ್ಪನ ಬೆಟ್ಟದಲ್ಲಿ ಎತ್ತ ನೋಡಿದರತ್ತ ಭಕ್ತ ಸಮೂಹವೇ ಕಾಣುತ್ತಿದ್ದ ದೃಶ್ಯ ಶನಿವಾರ ಕಂಡುಬಂದಿತು. ದೀಪಾವಳಿ ಜಾತ್ರೆ ಪ್ರಯುಕ್ತ ದೇವಾಲಯ ಸೇರಿದಂತೆ ವಿವಿಧ ಕಡೆಗಳಲ್ಲಿ ವೈವಿಧ್ಯಮಯವಾಗಿ ದೀಪಾಲಂಕಾರ ಮಾಡಲಾಗಿದ್ದು ಭಕ್ತರ ಕಣ್ಮನ ಸೆಳೆಯುತ್ತಿದೆ. ಈಗಾಗಲೇ ಸಹಸ್ರಾರು ಮಂದಿ ಭಕ್ತರು ಕ್ಷೇತ್ರಕ್ಕೆ ಬರುತ್ತಿದ್ದಾರೆ. ಪ್ರಾಧಿಕಾರವು ಕೂಡ ನಿರಂತರ ಪ್ರಸಾದದ ವ್ಯವಸ್ಥೆ, ಕುಡಿಯುವ ನೀರು, ಶೌಚಾಲಯ ಸೇರಿ ಅಗತ್ಯ ಕ್ರಮ ಕೈಗೊಂಡಿದೆ.