ನಾಯಕನಹಟ್ಟಿ-: ಆರೋಗ್ಯವೇ ಭಾಗ್ಯ ಎಂಬಂತೆ ಗ್ರಾಮೀಣ ಜನರ ಬಾಗಿಲಿಗೆ ಉಚಿತ ಆರೋಗ್ಯ ಸೇವೆ ನೀಡುತ್ತಿರುವುದು ಉತ್ತಮ ಸಂಗತಿಯಾಗಿದೆ.ಉಚಿತ ಆರೋಗ್ಯ ತಪಾಸಣೆ ಶಿಬಿರಗಳು ಗ್ರಾಮೀಣರಿಗೆ ವರದಾನವಾಗಿವೆ ಎಂದು ನಾಯಕನಹಟ್ಟಿ ಪಟ್ಟಣ ಪಂಚಾಯತಿ ಅಧ್ಯಕ್ಷೆ ಮಂಜುಳಾ ಶ್ರೀಕಾಂತ್ ಹೇಳಿದರು. ಸೋಮವಾರ ಪಟ್ಟಣ ಪಂಚಾಯತಿ ಆವರಣದಲ್ಲಿ ಜಿಲ್ಲಾ ಪಂಚಾಯತ್ ಚಿತ್ರದುರ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಚಿತ್ರದುರ್ಗ,ರಾಷ್ಟ್ರೀಯ ಆರೋಗ್ಯ ಅಭಿಯಾನ ಚಿತ್ರದುರ್ಗ ,ತಾಲೂಕು ತಾಲೂಕು ಆಡಳಿತ,ತಾಲೂಕು ಪಂಚಾಯತ್ ಸಹಯೋಗದಲ್ಲಿ ನಾಯಕನಹಟ್ಟಿ ಪಟ್ಟಣದಲ್ಲಿ ನಡೆದ ಆರೋಗ್ಯ ಮೇಳ ಉದ್ಘಾಟಿಸಿ ಮಾತನಾಡಿದರು.