ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ತಾಲೂಕು ಪಂಚಾಯತಿ ಕಚೇರಿಯ ಮುಂದೆ ಕೆಲದಿನಗಳಿಂದ ಕೆರೆಗಳಿಗೆ ನೀರು ತುಂಬಿಸಲು ಹಾಗೂ ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ಒತ್ತಾಯಿಸಿ ರೈತರು ಪ್ರತಿಭಟನೆ ಧರಣಿ ನಡೆಸುತ್ತಿದ್ದಾರೆ. ಇಂದು ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದ ಯಧುವೀರ್ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಎನ್.ಮಹೇಶ್, ಮಾಜಿ ಶಾಸಕ ನಿರಂಜನ್ ಕುಮಾರ್ ಭಾಗವಹಿಸಿ ರೈತರ ಹೋರಾಟಕ್ಕೆ ಬೆಂಬಲ ನೀಡಿದರು.