ಶಿವಮೊಗ್ಗ: ನಗರದ ಹಲವಡೆ ಏರಿಯಾ ಡಾಮಿನೇಷನ್ ವಿಶೇಷ ಕಾರ್ಯಾಚರಣೆ: ನಾಲ್ವರ ವಿರುದ್ಧ ಪ್ರಕರಣ ದಾಖಲು
ಶಿವಮೊಗ್ಗ ನಗರದಲ್ಲಿ ಕಾನೂನು ವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣ, ಕೆಎಸ್ಆರ್ಟಿಸಿ ಬಸ್ ನಿಲ್ದಾಣ, ಮಂಜುನಾಥ ಬಡಾವಣೆ ಸೇರಿದಂತೆ ಹಲವೆಡೆ ಏರಿಯಾ ಡಾಮಿನೇಷನ್ ವಿಶೇಷ ಕಾರ್ಯಾಚರಣೆಯನ್ನು ಕೈಗೊಂಡಿದ್ದರು. ಗಾಂಜಾ ಸೇವನೆ ಮಾಡಿದ್ದ ಬಗ್ಗೆ ಅನುಮಾನ ಬಂದಂತಹ ಎಂಟು ಜನ ಆರೋಪಿಗಳನ್ನು ಪೊಲೀಸ್ ಠಾಣೆಗೆ ಕರೆತಂದು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಈ ವೇಳೆ ನಾಲ್ಕು ಜನರು ಗಾಂಜಾ ಸೇವನೆ ಮಾಡಿರುವುದು ತಿಳಿದುಬಂದ ಹಿನ್ನೆಲೆ ಪ್ರಕರಣ ದಾಖಲಿಸಲಾಗಿದೆ. ಈ ಕುರಿತಾದ ಮಾಹಿತಿ ಶನಿವಾರ ಲಭ್ಯವಾಗಿದೆ.