ಕಾರವಾರ : ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮೊಬೈಲ್ ಕಳೆದು ಹೋಗಿರುವ ಬಗ್ಗೆ ಪೊಲೀಸ್ ಠಾಣೆಯಲ್ಲಿ ಕೆಲ ದಿನಗಳ ಹಿಂದೆ ದಾಖಲಾಗಿದ್ದ ದೂರಿಗೆ ಸಂಬಂಧಿಸಿದಂತೆ ಪಿಎಸ್ಐ ಅವರ ನೇತೃತ್ವದಲ್ಲಿ ತನಿಖೆಗಿಳಿದ ಪೊಲೀಸರು ಕಳೆದು ಹೋಗಿದ್ದ ಮೊಬೈಲನ್ನು ಪತ್ತೆ ಹಚ್ಚಿ ಕಾರವಾರ ನಗರ ಪೊಲೀಸ್ ಠಾಣೆಯಲ್ಲಿ ವಾರಿಸುದಾರರಿಗೆ ಒಪ್ಪಿಸುವ ಮೂಲಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಮೊಬೈಲನ್ನು ಪತ್ತೆ ಹಚ್ಚಿ ಹಸ್ತಾಂತರಿಸಿದ ಕಾರವಾರ ನಗರ ಠಾಣೆಯ ಪೊಲೀಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಮೊಬೈಲಿನ ವಾರಿಸುದಾರರು ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ಭಾನುವಾರ ಸಂಜೆ 5.30 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.