ದಾಂಡೇಲಿ : ಅಗಲಿದ ಹಿರಿಯ ಪತ್ರಕರ್ತರು, ಕರ್ನಾಟಕ ಸಂಘದ ಅಧ್ಯಕ್ಷರು, ಬಂಗೂರ ನಗರ ಜೂನಿಯರ್ ಕಾಲೇಜಿನ ನಿವೃತ್ತ ಪ್ರಾಚಾರ್ಯರು, ಶ್ರೀ ಜಗಜ್ಯೋತಿಜ್ಯೋತಿ ಬಸವೇಶ್ವರ ಮೂರ್ತಿ ಪ್ರತಿಷ್ಠಾಪನಾ ಸಮಿತಿಯ ಅಧ್ಯಕ್ಷರು, ಲಯನ್ಸ್ ಕ್ಲಬ್ಬಿನ ಪ್ರಮುಖರು, ಪಟೇಲ್ ನಗರದ ಮೊಹರಂ ಕಮೀಟಿಯ ಅಧ್ಯಕ್ಷರು ಹಾಗೂ ಲಯನ್ಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಗಳಾಗಿದ್ದ ಯು.ಎಸ್.ಪಾಟೀಲ್ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘ, ಕನ್ನಡ ಸಾಹಿತ್ಯ ಪರಿಷತ್ ಮತ್ತು ಕರ್ನಾಟಕ ಸಂಘದ ಆಶ್ರಯದಲ್ಲಿ ನಗರದ ಸಾಹಿತ್ಯ ಭವನದಲ್ಲಿ ನುಡಿ ನಮನ ಸಲ್ಲಿಸುವ ಕಾರ್ಯಕ್ರಮವನ್ನು ಸೋಮವಾರ ಸಂಜೆ 7 ಗಂಟೆಗೆ ಹಮ್ಮಿಕೊಳ್ಳಲಾಗಿತ್ತು. ಆರಂಭದಲ್ಲಿ ಯು.ಎಸ್.ಪಾಟೀಲ್ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ, ಮೌನ ಪ್ರಾರ್ಥನೆಯನ್ನು ಸಲ್ಲಿಸಲಾಯ್ತು.