ಹಾವೇರಿ: ಪ್ರಜಾಪ್ರಭುತ್ವದ ಅಡಿಯಲ್ಲಿ ಪ್ರತಿಯೊಬ್ಬರಿಗೂ ಜೀವಿಸುವ ಹಕ್ಕಿದೆ; ನಗರದಲ್ಲಿ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ
Haveri, Haveri | Sep 15, 2025 ದೇಶದ ಪ್ರಜೆಗಳಾದ ನಾವುಗಳು ಪ್ರಜಾಪ್ರಭುತ್ವದ ಅಡಿಯಲ್ಲಿ ಜೀವಿಸುತ್ತಿದ್ದೇವೆ, ಪ್ರತಿಯೊಬ್ಬರಿಗೂ ಇಲ್ಲಿ ಸಮಾನ ಅವಕಾಶಗಳಿವೆ ಎಂದು ವಿಧಾನಸಭೆ ಉಪ ಸಭಾಧ್ಯಕ್ಷ ಶಾಸಕ ರುದ್ರಪ್ಪ ಲಮಾಣಿ ಹೇಳಿದರು. ನಗರದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಸೋಮವಾರ ಜಿಲ್ಲಾಡಳಿತದಿಂದ ಹಮ್ಮಿಕೊಳ್ಳಲಾಗಿದ್ದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಸಂವಿಧಾನವು ನಮ್ಮ ಉಸಿರು ಇದ್ದಹಾಗೆ, ಸಂವಿಧಾನವನ್ನು ನಾವು ಗೌರವಿಸಬೇಕು. ಸಂವಿಧಾನದಿಂದ ಪ್ರಜಾಪ್ರಭುತ್ವದಲ್ಲಿ ಹೇಗೆ ಜೀವಿಸಬೇಕು ಎಂಬುದನ್ನು ತಿಳಿದುಕೊಂಡಿದ್ದೇವೆ ಎಂದರು.