ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರಿಕಾಟಿ ಗೇಟ್ ಬಳಿಯ ಅಂಗಡಿಯಲ್ಲಿ ಕಳ್ಳತನ ಮಾಡಲು ಯತ್ನಿಸಿದ್ದಾರೆ ಎಂದು ಪೊಲೀಸ್ ಠಾಣೆಗೆ ದೂರು ಬಂದಿದೆ. ಈ ವೇಳೆ ಸ್ಥಳಕ್ಕೆ ತಕ್ಷಣ ಪೊಲೀಸರು ಆಗಮಿಸಿ ಅನುಮಾನ ಬಂದ ಹಿನ್ನೆಲೆ ಅಲ್ಲೇ ಇದ್ದ ಆಟೋ ಸಮೇತ ಓರ್ವ ವ್ಯಕ್ತಿಯನ್ನು ಬಂಧಿಸಿ ಬೇಗೂರು ಠಾಣೆಗೆ ಕರೆದೊಯ್ತು ವಿಚಾರಣೆ ನಡೆಸಲಾಗುತ್ತಿದೆ.