ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೋರ್ವ ಕಾಂಗ್ರೆಸ್ ಯುವ ಮುಖಂಡನ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿರುವ ಘಟನೆ ಕೊಳ್ಳೇಗಾಲ ತಾಲ್ಲೂಕಿನ ತೇರಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಇದೇ ಗ್ರಾಮದ ಕಾಂಗ್ರೆಸ್ ಯುವ ಮುಖಂಡ ಸುನೀಲ್ ಚಾಕು ಇರಿತಕ್ಕೆ ಒಳಗಾದವರು. ತೀರ್ವ ರಕ್ತಸ್ರಾವ ದಿಂದ ಗಾಯಗೊಂಡಿರುವ ಸುನೀಲ್ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುನೀಲ್ ಮೇಲೆ ಚಾಕು ಇರಿದಿರುವ ವ್ಯಕ್ತಿ ತೇರಂಬಳ್ಳಿ ಗ್ರಾಮದ ರಾಜಣ್ಣ ಎಂಬುದಾಗಿ ತಿಳಿದು ಬಂದಿದೆ.