ಹೊಸಕೋಟೆ ವಿಧಾನಸಭಾ ಕ್ಷೇತ್ರದ ಅನುಗೊಂಡನಹಳ್ಳಿ ಹೋಬಳಿಯ ಸಮೇತನಹಳ್ಳಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಮೂಲ್ ನಿರ್ದೇಶಕರಾದ ಶ್ರೀ ಕೆ.ಎಂ.ಎಂ. ಮಂಜುನಾಥ್ ಅವರು ಗಣ್ಯರೊಂದಿಗೆ ಪಾಲ್ಗೊಂಡು, ಹಬ್ಬದ ಅಂಗವಾಗಿ ರಾಸುಗಳಿಗೆ ಬೂಸಾ ಮೂಟೆಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಮಾತನಾಡಿ, ಸಂಕ್ರಾಂತಿ ಹಬ್ಬವು ರೈತರ ಬದುಕಿನೊಂದಿಗೆ ನೇರವಾಗಿ ಸಂಬಂಧಿಸಿದ ಹಬ್ಬವಾಗಿದ್ದು, ಕೃಷಿ ಹಾಗೂ ಪಶುಸಂಗೋಪನೆಯನ್ನು ಗೌರವಿಸುವ ಸಂಪ್ರದಾಯವನ್ನು ಉಳಿಸಬೇಕು ಎಂದು ತಿಳಿಸಿದರು. ಗ್ರಾಮೀಣ ಸಂಸ್ಕೃತಿ ಮತ್ತು ಪರಂಪರೆಯನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯುವಲ್ಲಿ ಇಂತಹ ಹಬ್ಬಗಳ ಪಾತ್ರ ಮಹತ್ವದ್ದಾಗಿದೆ ಎಂ