ಚಿಟಗುಪ್ಪ: ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೆಗೆ ಮನ್ನಾಎಖೆಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ
ಗ್ರಾಮ ಪಂಚಾಯಿತಿ ಆಗಿದ್ದ ಮನೆ ಕೇಳಿ ಗ್ರಾಮ ಪಟ್ಟಣ ಪಂಚಾಯತಿಯಾಗಿ ಮೇಲ್ದರ್ಜೆಗೆ ಏರಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಗುರುವಾರ ಸಂಜೆ 5ಕ್ಕೆ ಪಟಾಕಿ ಸಿಡಿಸಿ ಪರಸ್ಪರ ಸಿಹಿ ವಿನಿಮಯಿಸಿಕೊಂಡು ಸಂಭ್ರಮಾಚರಣೆ ನಡೆಸಿದರು. ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಅವರು ನಿರಂತರವಾಗಿ ಸದನದಲ್ಲಿ ಸರ್ಕಾರದ ಮೇಲೆ ಒತ್ತಡ ಹೇರಿದ ಪರಿಣಾಮ ಗ್ರಾಮ ಪಂಚಾಯಿತಿ ಆಗಿ ಇದ್ದದ್ದು ಪಟ್ಟಣ ಪಂಚಾಯತಿಯಾಗಿರಲು ಸಾಧ್ಯವಾಗಿದೆ ಎಂದು ಪಕ್ಷದ ಕಾರ್ಯಕರ್ತರು ಸಂತಸದಿಂದ ನುಡಿದರು.