ತೀರ್ಥಹಳ್ಳಿ: ಆರಗ ಗ್ರಾಮದಲ್ಲಿ ದಾಸವರೇಣ್ಯ ಪುರಂದರ ದಾಸರ ಕೀರ್ತನೋತ್ಸವ
ದಾಸವರೇಣ್ಯ ಪುರಂದರ ದಾಸರ ಕೀರ್ತನೋತ್ಸವ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆರಗ ಗ್ರಾಮದಲ್ಲಿ ಮಂಗಳವಾರ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಆದಿಚುಂಚನಗಿರಿ ಮಹಾ ಸಂಸ್ಥಾನ ಪೀಠದ ಪೀಠಾಧ್ಯಕ್ಷರಾದ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮಿಗಳು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ತೀರ್ಥಹಳ್ಳಿಯ ಶಾಸಕ ಆರಗ ಜ್ಞಾನೇಂದ್ರ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.