ಶಿವಮೊಗ್ಗ: ಅಪಘಾತದಲ್ಲಿ ಮೃತಪಟ್ಟ ಎಮ್ಮೆಹಟ್ಟಿ ಗ್ರಾಮದ 13 ಜನರ ಕುಟುಂಬಸ್ಥರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸಾಂತ್ವನ
ಹಾವೇರಿಯ ಬಳಿ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ 13 ಮಂದಿ ಮೃತಪಟ್ಟಿದ್ದರು. ಇನ್ನಾ ಭಾನುವಾರ ಎಮ್ಮೆ ಹಟ್ಟಿ ಗ್ರಾಮಕ್ಕೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ಭೇಟಿ ನೀಡಿ ಸಾಂತ್ವಾನವನ್ನು ಹೇಳಿದರು. ಈ ಸಂದರ್ಭದಲ್ಲಿ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್, ಗ್ರಾಮದ ಮುಖಂಡರು ಸೇರಿದಂತೆ ಹಲವರು ಉಪಸ್ಥಿತರಿದ್ದರು.