ರೈತರೊಬ್ಬರಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಧಿಕಾರಿಯ ಕಾರು ಜಪ್ತಿ ಮಾಡುವಂತೆ ನ್ಯಾಯಾಲಯ ಆದೇಶಿಸಿದೆ. ವಸತಿ ಯೋಜನೆಗಾಗಿ ಹರಮಘಟ್ಟದ ಕೃಷಿಕ ನಂದಾಯಪ್ಪ ಅವರ ಒಂದು ಎಕರೆ ಜಮೀನನ್ನು 1992ರಲ್ಲಿ ಸರ್ಕಾರ ವಶಕ್ಕೆ ಪಡೆದಿತ್ತು. ಇದಕ್ಕೆ 22 ಲಕ್ಷ ಪರಿಹಾರ ನೀಡವುದಾಗಿ ತಿಳಿಸಿದ್ದ ಸರ್ಕಾರ ಕೇವಲ 9 ಲಕ್ಷ ನೀಡಿತ್ತು. ಬಾಕಿ ಹಣಕ್ಕಾಗಿ ರೈತ ನಂದಾಯಪ್ಪ ಕಚೇರಿಗೆ ಅಲೆದಾಡಿದರು ಫಲ ಸಿಕ್ಕಿರಲಿಲ್ಲ. ಕೊನೆಗೆ ನಂದಾಯಪ್ಪ ಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಎರಡನೇ ಹಿರಿಯ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ 95,88,283 ಪರಿಹಾರವನ್ನು ಪಾವತಿಸುವಂತೆ ಸೂಚಿಸಿತ್ತು.