ಗುರುಮಿಟ್ಕಲ್: ಅಜಲಾಪುರ ಗ್ರಾಮ ಪಂಚಾಯಿತಿ ಮುಂದೆ ಮೂಲಭೂತ ಸೌಲಭ್ಯಗಳಿಗಾಗಿ ಸಾರ್ವಜನಿಕರ ಪ್ರತಿಭಟನೆ
ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲೂಕಿನ ಅಜಲಾಪುರ ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಸಾಮಾಜಿಕ ಹೋರಾಟಗಾರ ಉಮೇಶ ಮುದ್ನಾಳ ನೇತೃತ್ವದಲ್ಲಿ ಸಾರ್ವಜನಿಕರು ಮುಳ್ಳು ಬೇಲಿ ಹಿಡಿದು ಪ್ರತಿಭಟನೆ ನಡೆಸಿದ್ದಾರೆ. ಮಂಗಳವಾರ ಮಧ್ಯಾಹ್ನ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅನೇಕ ಜನರು ಗ್ರಾಮದಲ್ಲಿ ಮೂಲಭೂತ ಸೌಲಭ್ಯಗಳಿಲ್ಲ ಕುಡಿಯುವ ನೀರಿನ ಸಮಸ್ಯೆ ಚರಂಡಿ ವ್ಯವಸ್ಥೆ ಸ್ವಚ್ಛತೆ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಗೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಗ್ರಾಮದ ನೂರಾರು ಜನ ಭಾಗವಹಿಸಿದ್ದರು.