ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸೊರಬ ತಾಲೂಕಿನ ಕುಬಟೂರಿನ ಗೃಹ ಕಚೇರಿಯಲ್ಲಿ ಶನಿವಾರ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿದರು.ಸ್ವಕ್ಷೇತ್ರ ಸೊರಬ ತಾಲೂಕಿನ ವಿವಿಧ ಗ್ರಾಮಗಳ ಗ್ರಾಮಸ್ಥರು ವಿವಿಧ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತಾಗಿ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಮಾಡಿದರು. ಬಳಿಕ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚನೆಯನ್ನು ಸಚಿವರು ನೀಡಿದರು