ಹಾಸನ: ಗಣೇಶ ಮೆರವಣಿಗೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ಜೆಡಿಎಸ್ ವತಿಯಿಂದ ತಲಾ ಒಂದು ಲಕ್ಷ ಪರಿಹಾರ ನಗರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿಕೆ
Hassan, Hassan | Sep 14, 2025 ಹಾಸನ ತಾಲೂಕಿನ ಮೊಸಳೆ ಹೊಸಳ್ಳಿ ಬಳಿ ಗಣೇಶ ಮೆರವಣಿಗೆಯ ವೇಳೆ ಮೃತಪಟ್ಟ ಕುಟುಂಬಸ್ಥರಿಗೆ ತಲಾ 1 ಲಕ್ಷ ಪರಿಹಾರ ನೀಡುವುದಾಗಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಹೇಳಿದ್ದಾರೆ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಮೊಸಳೆಹೊಸಳ್ಳಿಯಲ್ಲಿ ನಡೆದ ದುರಂತದಲ್ಲಿ ಹತ್ತು ಜನರ ಸಾವಾಗಿದೆ. ನಿನ್ನೆ ಗಾಯಾಳುಗಳನ್ನು ಭೇಟಿಯಾಗಿ ಪಕ್ಷದಿಂದ ನೆರವು ನೀಡಿದ್ದೇವೆ. ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 1 ಲಕ್ಷ ರೂ. ನೆರವು ಹಾಗೂ ಗಂಭೀರ ಗಾಯಗೊಂಡವರಿಗೆ ತಲಾ 25 ಸಾವಿರ ನೆರವು ನೀಡಿದ್ದೇವೆ. ಬೆಳಗ್ಗೆ ಮೃತರ ಕುಟುಂಬದ ಸದಸ್ಯರನ್ನು ಭೇಟಿ ಮಾಡಿ ಬಂದಿದ್ದೇನೆ ಎಂದು ಹೇಳಿದರು.