ವಿಜಯಪುರ: ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲೆಯಲ್ಲಿ ವಾಸಿಸುತ್ತಿರುವ ನಗರದ ನಮೋ ಬಡಾವಣೆಯ ನಿವಾಸಿಗಳು #localissue
ವಿಜಯಪುರ ನಗರದ ನಮೋ ನಗರದಲ್ಲಿ ಪ್ರಧಾನ ಮಂತ್ರಿ ಅವಾಸ ಯೋಜನೆ ಅಡಿಯಲ್ಲಿ ಮನೆಗಳನ್ನು ನಿರ್ಮಾಣ ಮಾಡಿದ್ದಾರೆ ಆದರೆ ಇಲ್ಲಿ ಸರಿಯಾಗಿ ವಿದ್ಯುತ್ ಸಂಪರ್ಕವಿಲ್ಲ ಹೀಗಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿ ಕೊಡಬೇಕು ಎಂದು ಭಾನುವಾರ ಮಧ್ಯಾಹ್ನ 4ಗಂಟೆ ಸುಮಾರಿಗೆ ಬಡಾವಣೆಯ ನಿವಾಸಿಗಳು ಮಾಧ್ಯಮ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು. ನಮೋ ಬಡಾವಣೆಯಲ್ಲಿ ಸುಮಾರು 500ಕ್ಕೂ ಹೆಚ್ಚು ಕುಟುಂಬಗಳು ವಾಸ ಮಾಡುತ್ತಿದ್ದಾರೆ ಆದರೆ ಇಲ್ಲಿ ವಿದ್ಯುತ್ ಸಂಪರ್ಕವಿಲ್ಲದೆ ಕತ್ತಲೆಯಲ್ಲಿ ದಿನ ಕಳೆಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಮ್ಮ ಸಮಸ್ಯೆಯನ್ನು ಮಾಧ್ಯಮಕ್ಕೆ ಹೇಳಿಕೊಂಡರು.